ಮುಖ್ಯಮಂತ್ರಿ ಜೊತೆ ಚರ್ಚಿಸಿ ತೀರ್ಮಾನ : ಬೆಳಮಗಿ

ಹಾಸನ : ನಗರದಲ್ಲಿ ಪಶು ವೈದ್ಯಕೀಯ ಮಹಾ ಕಾಲೇಜು ಕಟ್ಟಡ ನಿರ್ಮಾಣ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೊಂದಿಗೆ ಸಮಾಲೋಚನೆ ನಡೆಸಿ, ನಂತರ ನಿರ್ಣಯ ಕೈಗೊಳ್ಳಲಾಗುವುದು ಎಂದು ಪಶು ಸಂಗೋಪನಾ ಸಚಿವ ರೇವುನಾಯಕ ಬೆಳಮಗಿ ತಿಳಿಸಿದರು. ಸ್ಥಳ ಪರಿಶೀಲನೆ ನಡೆಸಲಾಗು ತ್ತಿದ್ದು, ಚಿಕ್ಕ ಹೊನ್ನೇನಹಳ್ಳಿ ಗ್ರಾಮ ಸ್ಥರು ಪ್ರತಿ ವಿರೋಧ ವ್ಯಕ್ತಪಡಿಸಿದ್ದಾರೆ. ಬೇರೆ ಸ್ಥಳ ಆಯ್ಕೆ ಮಾಡಿಕೊಳ್ಳ ಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ ಎಂದು ಬುಧವಾರ ಪತ್ರ ಕರ್ತರಿಗೆ ತಿಳಿಸಿದರು. ಈಗ ಚಿಕ್ಕಹೊನ್ನೇನಹಳ್ಳಿ ಗ್ರಾಮದ ಸನಿಹ ೧೪೪ ಎಕರೆ ಕಾಲೇಜು ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆ ಆರಂಭವಾಗಿದೆ. ಈ ಸಂಬಂಧ ಪರಿಹಾರಕ್ಕೆ ೨೯ ಕೋಟಿ ರೂ. ಅಗತ್ಯವಿದೆ. ಈ ಪೈಕಿ ೧೪ ಕೋಟಿ ೯೨ ಲಕ್ಷ ರೂ. ಹಣವನ್ನು ಭೂ ಸ್ವಾಧೀನ ಕಛೇರಿಯಲ್ಲಿ ನಿಶ್ಚಿತ ಠೇವಣಿ ಇಡಲಾಗಿದೆ. ಇದಕ್ಕೆ ಹಣದ ಕೊರತೆ ಇಲ್ಲ. ಇನ್ನೂ ಭೂ ಪರಿಹಾರ ವಿತರಣೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ರೇಷ್ಮೆ ಇಲಾಖೆ ಸನಿಹ ೬೦ ಎಕರೆ ಜಾಗ ಇದೆ. ೨೫ ಎಕರೆ ಗೋಮಾಳ ಜಮೀನು ಇದೆ. ಬಾಕಿ ೪೦ ಎಕರೆ ಜಾಗದ ಅವಶ್ಯಕತೆ ಇದೆ ಎಂದು ಸಚಿವರು ವಿವರಣೆ ನೀಡಿದರು. ಪಶು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಸ್ಥಳವನ್ನು ನಿಗದಿಗೊಳಿಸಿದೆ. ಟೆಂಡರ್ ಕರೆಯ ಲಾಗಿದೆ. ಇದಕ್ಕೆ ಯೋಜನಾ ಮಂಜೂರಾತಿ ದೊರೆತಿದೆ ಎಂದು ಹಿಂದಿನ ಸರ್ಕಾರದ ಕ್ರಮದ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪಶು ವೈದ್ಯಕೀಯ ಕಾಲೇಜನ್ನು ರದ್ದುಗೊಳಿಸುವ ಉದ್ದೇಶ ಸರ್ಕಾರ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದ ಸಚಿ ವರು, ಕಾಲೇಜು ನಿರ್ಮಾಣಕ್ಕೆ ಸ್ಥಳದ ಸಮಸ್ಯೆ ಇದೆ. ಸೂಕ್ತ ಜಾಗವನ್ನು ಗುರುತಿಸಿ ಕಟ್ಟಡ ನಿರ್ಮಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷ ನವಿಲೆ ಅಣ್ಣಪ್ಪ, ಬೆಂಗಳೂರು ಪಶು ವೈದ್ಯಕೀಯ ಮಹಾವಿದ್ಯಾಲಯದ ಕುಲಪತಿ ಹೊನ್ನಪ್ಪಗೌಡ ಹಾಜರಿದ್ದರು.

No Comments to “ಮುಖ್ಯಮಂತ್ರಿ ಜೊತೆ ಚರ್ಚಿಸಿ ತೀರ್ಮಾನ : ಬೆಳಮಗಿ”

add a comment.

Leave a Reply

You must be logged in to post a comment.