ಪಠ್ಯಪುಸ್ತಕಗಳಿಗೆ ಖಾಸಗಿ ಶಾಲೆಗಳ ಆಗ್ರಹ

ಹಾಸನ : ಶಾಲೆಗಳು ಆರಂಭಗೊಂಡು ಒಂದೂವರೆ ತಿಂಗಳು ಕಳೆದರೂ, ಪಠ್ಯ ಪುಸ್ತಕಗಳನ್ನು ಸರ್ಕಾರ ವಿತರಿಸಿಲ್ಲ ಎಂದು ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿ ಬುಧವಾರ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ, ದೂರು ನೀಡಿದವು. ಸರ್ಕಾರ ನಿಗದಿಪಡಿಸಿದ ಅವಧಿಯೊಳಗೆ ಪಠ್ಯ ಪುಸ್ತಕಗಳಿಗೆ ಹಣದ ಡಿ.ಡಿ. ನೀಡಿ ದರೂ, ಪುಸ್ತಕಗಳನ್ನು ಇನ್ನೂ ಸರಬರಾಜು ಮಾಡಿಲ್ಲ. ಇದರಿಂದ ವಿದ್ಯಾರ್ಥಿಗಳ ವಿದ್ಯಾ ಭ್ಯಾಸಕ್ಕೆ ಅಡ್ಡಿಯಾಗಿದೆ. ಕೂಡಲೇ ಪಠ್ಯ ಪುಸ್ತಕಗಳನ್ನು ಒದಗಿಸಬೇಕು. ಇಲ್ಲದಿದ್ದಲ್ಲಿ ಬೀದಿಗಿಳಿದು ಹೋರಾಟ ನಡೆಸಲಾಗು ವುದು ಎಂದು ಎಚ್ಚರಿಸಿದರು. ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಸಂಘದ ಅಧ್ಯಕ್ಷ ಹೆಚ್‌.ಎಸ್‌. ಅನಿಲ್‌ಕುಮಾರ್‌, ಉಪಾಧ್ಯಕ್ಷೆ ತಾರಾ ಎಸ್‌.ಸ್ವಾಮಿ ನೇತೃತ್ವ ವಹಿಸಿದ್ದರು.

No Comments to “ಪಠ್ಯಪುಸ್ತಕಗಳಿಗೆ ಖಾಸಗಿ ಶಾಲೆಗಳ ಆಗ್ರಹ”

add a comment.

Leave a Reply

You must be logged in to post a comment.